ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ರಂಗೋಲಿ ಸ್ಪರ್ಧೆ, ಪ್ರತಿಜ್ಞಾ ವಿಧಿ ಬೋಧನೆ





ಉಪ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಮಸ್ಕಿ, ಏಪ್ರಿಲ್ 15 : ತಾಲೂಕಿನ ಬಪ್ಪೂರು ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ವಿಧಾನಸಭೆ ಚುನಾವಣೆ ನಿಮಿತ್ತ ಸ್ವೀಪ್ ಕಾರ್ಯಕ್ರಮದಡಿ ರಂಗೋಲಿ ಸ್ಪರ್ಧೆ ಹಾಗೂ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು.

ಸ್ಪರ್ಧೆಯಲ್ಲಿ ಸ್ವ ಸಹಾಯ ಗುಂಪಿನ ಮಹಿಳೆಯರು, ಶಾಲಾ ಕಾಲೇಜು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಬಪ್ಪೂರು ಗ್ರಾಪ‌ಂ ಅಭಿವೃದ್ಧಿ ಅಧಿಕಾರಿ ಭುವನೇಶ್ವರಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಬಾಲ್ಯದಿಂದಲೇ ಅನೇಕ ಕಷ್ಟಗಳನ್ನು ಎದುರಿಸಿ, ಬಡತನದಲ್ಲಿಯೇ ದೇಶ ವಿದೇಶಗಳಲ್ಲಿ ಉನ್ನತ ವ್ಯಾಸಂಗ ಕೈಗೊಂಡು, ಇಡೀ ವಿಶ್ವಕ್ಕೆ ಮಾದರಿಯಾಗಿರುವ ಭಾರತದ ಸಂವಿಧಾನ ರಚಿಸಿದರು. ಸಂವಿಧಾನ ಬದ್ಧವಾಗಿ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ದಯಾ ಪಾಲಿಸಿದರು‌. ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ಮತದಾನ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು. ಈ ನಿಟ್ಟಿನಲ್ಲಿ ಯುವಕರು ಸ್ಥಳೀಯರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ತದ ನಂತರ ಪ್ರತಿಜ್ಞಾ ವಿಧಿ ಬೋಧಿಸಿದರು‌.
ರಂಗೋಲಿ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
ಈ ವೇಳೆ ಗ್ರಾಪ‌ಂ ಸಿಬ್ಬಂದಿ ಬಸನಗೌಡ, ಕಂಪ್ಯೂಟರ್‌ ಆಪರೇಟರ್ ನಾಗಪ್ಪ, ಬಿಎಫ್ಟಿ ಸುಖಮುನಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಇತರರಿದ್ದರು. 


Post a Comment

Previous Post Next Post