ಬಾಗಲಕೋಟೆ ಮತಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ವೀರಭದ್ರಯ್ಯ ಚರಂತಿಮಠ ಹೆಸರು ಘೋಷಣೆ




ಉಪ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ
UDAYAVANI NEWS 
ಬಾಗಲಕೋಟೆ, ಏಪ್ರಿಲ್ 12 : ತೀವ್ರ ಕುತೂಹಲ ಕೆರಳಿಸಿದ ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರನ್ನ ಘೋಷಿಸುವ ಮೂಲಕ ಚುನಾವಣಾ ಅಖಾಡಕ್ಕೆ ಬಿಜೆಪಿ ಸಿದ್ಧವಾಗಿದೆ.

ತೀರಾ ಕುತೂಹಲ ಕೆರಳಿಸಿದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ವೀರಭದ್ರಯ್ಯ ಚರಂತಿಂಠ ಹೆಸರು ಘೋಷಣೆ ಮಾಡುವ ಮೂಲಕ ಅಧಿಕೃತ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ.

ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆದಿದ್ದು,ಇನ್ನು ಕೊನೆ ಕ್ಷಣದಲ್ಲಿ ಬಿಜೆಪಿಯ ಆಂತರಿಕ ಸಮೀಕ್ಷಾ ವರದಿ ಅನ್ವಯ ಅಭ್ಯರ್ಥಿಯಾಗಿ ಹಾಲಿ ಶಾಸಕ ವೀರಭದ್ರಯ್ಯ ಚರಂತಿಂಠ ಹೆಸರು ಘೋಷಣೆ ಮಾಡುವ ಮೂಲಕ ಬಿಜೆಪಿ ಪಕ್ಷ ತೆರೆ ಎಳೆದಿದೆ.

Post a Comment

Previous Post Next Post