ಎರ್ಮಾಳ್ ತೆಂಕ ಎಜುಕೇಶನ್ ಸೊಸೈಟಿ ರಿ. ಮುಂಬಯಿ ಮತ್ತು ಎರ್ಮಾಳ್ ತೆಂಕ ವತಿಯಿಂದ ಪ್ರವರ್ತಿತ ಅದಮಾರು ಮಠ ಶ್ರೀ ವಿಭುದೇಶ ತೀರ್ಥ ಸ್ವಾಮೀಜಿಯವರ ಸ್ಮರಣಾರ್ಥ ಕಿನಾರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಸಮಾಜದ ಅಭಿವೃದ್ಧಿಯು ಪ್ರತಿಯೊಬ್ಬರು ಶಿಕ್ಷಣವಂತರಾದಾಗ ಮಾತ್ರ ಸಾಧ್ಯ ಎರ್ಮಾಳ್ ತೆಂಕ ಎಜುಕೇಶನ್ ಸೊಸೈಟಿ ರಿ ಮುಂಬಯಿ ಇವರು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಆರಂಭಸಿ ಉತ್ತಮ ಗುಣ ಮಟ್ಟದ ಶಿಕ್ಷಣವನ್ನು ಮೀನುಗಾರ ಸಮುದಾಯ ಮಕ್ಕಳಿಗೆ ನೀಡಲು ಸಿದ್ದರಾಗಿರುವುದು ಸಂಸ್ಥೆ ಕಾರ್ಯ ಶ್ಲಾಘನೀಯ ವಾದದ್ದು ಎಂದು ಹೇಳಿದರು
ಸಮಾರಂಭವನ್ನು ಅದಮಾರು ಮಠದ ಪರಮಪೂಜ್ಯ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚಿಸಿದರು.
ಸಮಾರಂಭದಲ್ಲಿ ನಾಡೋಜ ಡಾ ಜಿ. ಶಂಕರ್, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಮಾಜಿ ಶಾಸಕರಾದ ಶ್ರೀ ವಿನಯ ಕುಮಾರ್ ಸೊರಕೆ, ಉದ್ಯಮಿಗಳಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ಪ್ರಸಾದ್ ಕಾಂಚನ್, ಶ್ರೀ ಹರಿಯಪ್ಪ ಕೋಟ್ಯಾನ್, ಶ್ರೀ ಆನಂದ ಪಿ ಸುವರ್ಣ, ಶ್ರೀ ಶಿವ ಟಿ. ಅಮೀನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.