ರಾಜ್ಯದ ಹಲವೆಡೆ ವರುಣನ ಆರ್ಭಟ: ಹವಾಮಾನ ಇಲಾಖೆಯ ಸೂಚನೆ

Udayavani News
0
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರು ದಿನಗಳ ಕಾಲ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು ಮತ್ತು ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ, ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳು ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
   ಅದರಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ಆಗಲಿದ್ದು, ಕರಾವಳಿ ಭಾಗದಲ್ಲೂ ಮಳೆ ಆಗಲಿದೆ. ಈ ಹಿನ್ನೆಲೆ ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Post a Comment

0Comments

Post a Comment (0)