ಲಿಂಗಸುಗೂರ: ತಾಲೂಕಿನ ಗೊಲಪಲ್ಲಿ ಗ್ರಾಮದ ಹತ್ತಿರ ರಾಷ್ಟ್ರೀಯ ಯ ಹೆದ್ದಾರಿ ೧೫೦(ಎ) ಬಳಿ ಸ್ವಿಫ್ಟ್ ಹಾಗೂ ಇಂಡಿಕಾ ಕಾರುಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಘಟನೆಯಲ್ಲಿ ಯಾದಗಿರಿ ಜಿಲ್ಲೆಯ ವಡಗೇರಾ ಮೂಲದ ಅಮರೇಶ(೩೦), ಗೋವಿಂದ(೩೫), ರಾಜು(೩೩) ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ವಡಗೇರಾಗೆ ತೆರಳುತ್ತಿದ್ದ ಇಂಡಿಕಾ ಕಾರು ಮತ್ತು ಗುಲ್ಬರ್ಗಾದಿಂದ ಲಿಂಗಸುಗೂರು ಮಾರ್ಗವಾಗಿ ತೆರಳುತ್ತಿದ್ದ ಸ್ವಿಫ್ಟ್ ಕಾರ್ ಮಧ್ಯೆ ನಡೆದ ಭೀಕರ ಅಪಘಾತ ಸಂಭವಿಸಿದೆ. ಇಂಡಿಕಾ ಕಾರಿನಲ್ಲಿದ್ದ ೫ ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ. ಇಂಡಿಕಾ ಕಾರಿನಲ್ಲಿದ್ದ ಇನ್ನೊರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳು ಲಿಂಗಸಗೂರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ, ಸಿಪಿಐ ಪ್ರಕಾಶ ಮಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಕುರಿತು ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಗೌತಮ ಚೌವ್ಹಾಣ ಲಿಂಗಸ್ಗೂರ