ಮಸ್ಕಿ ನಗರದ ಪರಿಶಿಷ್ಟ ವರ್ಗ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಉದ್ಘಾಟಿಸಿದ ಸಚಿವ ಬಿ.ಶ್ರೀರಾಮುಲು

Udayavani News
0
ವರದಿ ಗ್ಯಾನಪ್ಪ ದೊಡ್ಡಮನಿ ಮಸ್ಕಿ,
ಮಸ್ಕಿ :ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ರಾಯಚೂರು ಮತ್ತು ಸಮಾಜ ಕಲ್ಯಾಣ ಇಲಾಖೆ ಲಿಂಗಸುಗೂರು  ಸಂಯುಕ್ತ ಆಶ್ರಯದಲ್ಲಿ ಮಸ್ಕಿ ತಾಲೂಕಿನ ಮುದಬಾಳ ಕ್ರಾಸ್ ಮಾರ್ಗದಿಂದ ಹೋಗುವ ಮಾರಲದಿನ್ನಿ ಗ್ರಾಮದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿತ್ತು. ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವನ್ನು   ಸಚಿವ ಬಿ. ಶ್ರೀರಾಮುಲು ರವರು  ತಮ್ಮ ಅಭಯಾಸ್ತದಿಂದ ಉದ್ಘಾಟನೆಯನ್ನು ಮಾಡಿದರು.

ವಸತಿ ನಿಲಯವು 3 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ‌ ಸುಸಜ್ಜಿತವಾಗಿ ನಿರ್ಮಾಣಗೊಂಡ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟಿಸಿ ನೆರೆದಿರುವ ಸರ್ವರಿಗೂ ತಿಳಿಸುತ್ತಾ ಮಕ್ಕಳು ಶಿಕ್ಷಣ ವಂಚಿರಾಗಬಾರದೆನ್ನುವ ಉದ್ದೇಶದಿಂದ ಸರಕಾರ ಶೈಕ್ಷಣಿಕ ಅಭಿವೃದ್ದಿಗಾಗಿ ಮತ್ತು ವಸತಿ ಸೌಲಭ್ಯ ವ್ಯವಸ್ಥೆ ನೀಡುವ ಮೂಲಕ ಹಲವು ಮಹತ್ತರ ಯೋಜನೆಗಳನ್ನು ಜಾರಿಗೆ ತಂದಿದೆ. ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಅಭಿವೃದ್ದಿ ಅಡಿಯಲ್ಲಿ ಮಕ್ಕಳು ಪರಿಪೂರ್ಣ ಶಿಕ್ಷಣ ಪಡೆಯಬೇಕೆನ್ನುವ ಸದುದ್ದೇಶದಿಂದ ಅತ್ಯಾಧುನಿಕ ಸೌಲಭ್ಯದ ವಸತಿ ಶಾಲೆ ನಿರ್ಮಿಸಿದ್ದು, ಸರಕಾರದ ಸವಲತ್ತುಗಳ ಸದುಪಯೋಗವಾದಾಗ ಮಾತ್ರ ಸಾರ್ಥಕತೆಯಾಗುತ್ತದೆ ಎಂದು‌ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು   ಹೇಳಿದರು.

 
ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ  ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಅವರಿಗೆ ಶೈಕ್ಷಣಿಕವಾಗಿ ಉತ್ತಮ ಸಹಕಾರ ‌ದೊರೆತಾಗ ಇನ್ನೂ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯ. ಸರಕಾರ ಕೋಟ್ಯಾಂತರ ರೂಪಾಯಿ ಅನುದಾನ ನೀಡುವ ಮೂಲಕ ಇಂತಹ ಮಹತ್ವಾಕಾಂಕ್ಷೆ ಯೋಜನೆಗೆ ಅನುಷ್ಠಾನ ನೀಡಿದೆ.
 ವಸತಿ ಶಾಲೆಯ ವಾರ್ಡನ್ ಸಹಿತ ಎಲ್ಲಾ‌ ಅಧಿಕಾರಿ‌ ಸಿಬ್ಬಂದಿಗಳು ಉತ್ತಮ ವಾತಾವರಣ ಕಲ್ಪಿಸಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಆಹಾರ, ಆರೋಗ್ಯ ಹಾಗೂ ಶುಚಿತ್ವಕ್ಕೆ ಪ್ರಾಧಾನ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ 
 ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ರಾಯಚೂರು ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ, ಮಸ್ಕಿ ಉಪವಿಭಾಗದ ಸಹಾಯಕ ಆಯುಕ್ತರು, ತಾ.ಪಂ ಕಾರ್ಯನಿರ್ವಾಹಕಾಧಿಕಾರಿ ಪವನ್ ಕುಮಾರ, ಸಮಾಜ ಕಲ್ಯಾಣ ಅಧಿಕಾರಿ,ತಹಶೀಲ್ದಾರ್ ಕವಿತಾ.ಆರ್ ಹಾಗೂ ಸಾರ್ವಜನಿಕರಿದ್ದರು.


Post a Comment

0Comments

Post a Comment (0)