ಬೆಂಗಳೂರು,ಸೆ.10 : ದೊಡ್ಡಬಳ್ಳಾಪುರದಲ್ಲಿ ಇಂದು ಭಾರತೀಯ ಜನತಾ ಪಕ್ಷದ ವತಿಯಿಂದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಈ ಭಾಗದಲ್ಲಿ ಪಕ್ಷ ಅತ್ಯುತ್ತಮ ಸಂಘಟನೆ ಮಾಡಿದೆ. ಈ ಭಾಗದಲ್ಲಿ ದಾಖಲೆ ಪ್ರಾಮಾಣದ ವಿಜಯ ಸಾಧಿಸಿದ್ದೇವೆ. ಅದರ ಸಂಕೇತವಾಗಿ ಜನಸ್ಪಂದನ ಕಾರ್ಯಕ್ರಮ ಅಯೋಜಿಸಿದ್ದೇವೆ. ನಾವು ಮಾಡಿರುವ ಕೆಲಸಗಳು ಹಾಗೂ ಕಾರ್ಯಕ್ರಮಗಳು, ಕಷ್ಟದಲ್ಲಿ ಜನರಿಗೆ ನೀಡಿರುವ ನೆರವು.ವಿದ್ಯಾರ್ಥಿಗಳಿಗೆ, ರೈತರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದದವರಿಗೆ, ಮಹಿಳೆಯರಿಗೆ, ಯುವಕರಿಗೆ ಮಾಡಿರುವ ಕಾರ್ಯಕ್ರಮಗಳನ್ನು ತಿಳಿಸುವ ಕೆಲಸ ಇಂದು ಮಾಡಲಾಗುತ್ತದೆ ಎಂದರು. ಈಗಾಗಲೇ ಸಾಕಷ್ಟು ಕಾರ್ಯಕ್ರಮ ಗಳನ್ನು ಅನುಷ್ಠಾನ ಮಾಡಿದ್ದು, ಯಾವ ರೀತಿ ಅನುಷ್ಠಾನ ಮಾಡಲಾಗುವುದುದೆಂದು ತಿಳಿಸುವ ಕೆಲಸವನ್ನು ಮಾಡಲಾಗುವುದು ಎಂದರು.