ಮಲಪ್ರಭಾ ನದಿ ಪ್ರವಾಹದಿಂದ ಈರುಳ್ಳಿ ಬೆಳೆ ನೀರುಪಾಲು

Udayavani News
0
ವರದಿ:ಶರಣಪ್ಪ ಹೆಳವರ,ಬಾಗಲಕೋಟೆ
ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ಕಡಿಮೆಯಾಗಿದ್ದರೂ ಸಹ ಪ್ರವಾಹದ ಭೀತಿ ಮುಂದುವರೆದಿದೆ. ಮಲಪ್ರಭಾ ನದಿಯ ಪ್ರವಾಹ ಭೀತಿಯಿಂದಾಗಿ ಬಾದಾಮಿ ಹಾಗೂ ಹುನಗುಂದ ತಾಲೂಕಿನಲ್ಲಿ ಸಾಕಷ್ಟು ಹಾನಿಯಾಗಿದೆ.


         ಮನೆಗಳಿಗೆ ನೀರು ನುಗ್ಗಿ, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಆಲೂರ್ ಎಸ್. ಪಿ ಗ್ರಾಮದಲ್ಲಿ ಹೊಲಗದ್ದೆಗಳಲ್ಲಿ ಸಂಪೂರ್ಣ ನೀರು ನುಗ್ಗಿ ಕೆರೆಯಂತೆ ಕಾಣುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬೆಳೆದು ನಿಂತಿರುವ ಸೂರ್ಯಕಾಂತಿ, ಸಜ್ಜೆ, ಈರುಳ್ಳಿ ಸೇರಿದಂತೆ ಇನ್ನಿತರ ಬೆಳೆಗಳು ನೀರು ಪಾಲಾಗಿವೆ.ನಾಶವಾಗಿರುವ ಈರುಳ್ಳಿ ಕೈಯಲ್ಲಿ ಹಿಡಿದು ಕಣ್ಣೀರು ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಆಲೂರ್ ಎಸ್. ಪಿ ಗ್ರಾಮ ಸಾಕಷ್ಟು ಹಾನಿಯಾಗಿದ್ದು, ಸೂಕ್ತ ಪರಿಹಾರಕ್ಕಾಗಿ ರೈತರು ಮನವಿ ಮಾಡಿಕೊಂಡಿದ್ದಾರೆ.
                  ಈ ಮದ್ಯೆ ಆಸಂಗಿ ಬ್ಯಾರೇಜ್ ಸಂಪರ್ಕ ಕಡಿತವಾಗಿ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮಲಪ್ರಭಾ ನದಿ ನೀರು ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಬ್ಯಾರೇಜ್ ಜಲಾವೃತಗೊಂಡಿದೆ. ಇದರಿಂದ ಐತಿಹಾಸಿಕ ಸ್ಥಳಗಳಿಗೆ ಸಂಪರ್ಕ ಕಡಿತವಾಗಿದೆ. ಪ್ರವಾಸಿ ತಾಣಗಳಾದ ಐಹೊಳೆ, ಪಟ್ಟದಕಲ್​ಗೆ ಸಂಪರ್ಕ ಕಲ್ಪಿಸುವ ಮುಖ್ಯ ಸೇತುವೆ ಇದಾಗಿದ್ದು, ಈಗ ಸಂಚಾರಕ್ಕೆ ಸುತ್ತುವರೆದು ತೊಂದರೆ ಪಡುವಂತಾಗಿದೆ. ಅಕ್ಕಪಕ್ಕದಲ್ಲಿರುವ ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ತೊಂದರೆ ಆಗಿದೆ‌. ಆಸಂಗಿ, ಆಲೂರ್ ಎಸ್. ಪಿ, ಕೊಟ್ನಳ್ಳಿ ಗಾಮಗಳಿಗೆ ನೆರೆಯ ಭೀತಿ ಉಂಟಾಗಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

Post a Comment

0Comments

Post a Comment (0)