ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ

Udayavani News
0

ವರದಿ: ಗ್ಯಾನಪ್ಪ ದೊಡ್ಡಮನಿ ಮಸ್ಕಿ,
ಮಸ್ಕಿ, ಸೆ.15  :  ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಮತ್ತು ವಿಶ್ವಕರ್ಮ ಜಯಂತಿ ಆಚರಣೆ ಪೂರ್ವಭಾವಿ ಸಿದ್ಧತಾ ಸಭೆಯು ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಬುಧವಾರ 11 ಗಂಟೆಗೆ  ಜರುಗಿತು.

ಗ್ರೇಡ2 ತಹಶೀಲ್ದಾರ ಷಣ್ಮುಖಪ್ಪ  ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ  ಅವರು ಸೆ. 17 ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ರಾಜ್ಯ ಸರ್ಕಾರದ  ಸುತ್ತೋಲೇ ಇದ್ದು  ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕ ಹಾಗೂ ವಿಶ್ವಕರ್ಮ ಜಯಂತಿಯನ್ನು ಆಚರಿಸ ಬೇಕೆಂದರು. 
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಣೆಯ ಸಂದರ್ಭದಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್, ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕೆಂದರು. ಸೆ 17 ರಂದು  ಬೆಳಿಗ್ಗೆ 08-45 ಗಂಟೆಗೆ ತಹಶೀಲ್ದಾರ್ ಕಛೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಬೇಕು ನಂತರ ಕಚೇರಿಯಲ್ಲಿ  ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುತ್ತದೆ ನಂತರ ಕೇಂದ್ರ ಶಾಲಾ ಮೈದಾನದಲ್ಲಿ 9-15 ಕ್ಕೆ  ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಧ್ವಜಾರೋಹಣವನ್ನು ನೆರವೇರಿಸಲಾಗುವುದು ಹಾಗೂ ವಿಶೇಷ ಉಪನ್ಯಾಸವು ಇರುವುದು ಎಂದು ಹೇಳಿದರು.

 ಈ ಸಭೆಯಲ್ಲಿ ವಿವಿಧ ಮುಖಂಡರು, ವಿಶ್ವಕರ್ಮ ಸಮಾಜದ ಮುಖಂಡರು ಸಲಹೆ ಸೂಚನೆಗಳನ್ನು ತಿಳಿಸಿದರು. ಎಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಗೆ ಬರುವಂತಹ ಕಛೇರಿಗಳಲ್ಲಿ ಕಡ್ಡಾಯವಾಗಿ ರಾಜ್ಯ ಸರ್ಕಾರ ಆದೇಶ ಇರುವದರಿಂದ ತಪ್ಪದೇ ಕಛೇರಿಗಳಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಮತ್ತು ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಬೇಕು ನಿರ್ಲಕ್ಷ್ಯವಹಿಸಿದಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರೇಡ್ -2 ತಹಸಿಲ್ದಾರ ಷಣ್ಮುಖಪ್ಪ, ಶಿರಸ್ತೇದಾರ ವಿಜಯಕುಮಾರ ಸಜ್ಜನ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮಸ್ಕಿಯ ಹಿರಿಯ ಮುಖಂಡರು ಮತ್ತು ಸಂಘ-ಸಂಸ್ಥೆಗಳ ಮುಖಂಡರು, ವಿಶ್ವಕರ್ಮ ಸಮಾಜದ ಮುಖಂಡರು ಭಾಗಿಯಾಗಿದ್ದರು.

Post a Comment

0Comments

Post a Comment (0)