ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಶಾಸಕರಿಗೆ ಮನವಿ

Udayavani News
0
ವರದಿ ಗ್ಯಾನಪ್ಪ ದೊಡ್ಡಮನಿ ಮಸ್ಕಿ,
ಮಾನವಿ ಸೆ.10 : ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಮತ್ತು ಇದೇ ತಿಂಗಳು 12-09-2022 ರಂದು ಆರಂಭವಾಗುವ ಅಧಿವೇಶನದಲ್ಲಿ ಚರ್ಚಿಸಲು ಮಾನ್ವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರಿಗೆ ಎಸ್ಸಿ ಎಸ್ಟಿ ಸಂಘಟನೆಗಳ ಒಕ್ಕೂಟ ಹಾಗೂ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.

 ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿದ ಹಿನ್ನಲೆ ನಿವೃತ್ತ ನ್ಯಾಯಾಧೀಶ ನಾಗ ಮೋಹನದಾಸ್ ವರದಿ ಸಲ್ಲಿಸಿದ್ದು ಅದನ್ನು ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾರ ಮೀನಾಮೇಷ ಎಣಿಸಿದೆ. ಈ ಹಿನ್ನಲೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನಡೆಸಿರುವ ಆಹೋರಾತ್ರಿ ಧರಣಿ ನಡೆಸಿದ್ದಾರೆ. ಅವರ ಬೆಂಬಲಕ್ಕೆ ನಿಂತು ನಮ್ಮಗಳ ಮೀಸಲಾತಿ ಹೆಚ್ಚಳದ ವಿಚಾರವಾಗಿ ಸದನದಲ್ಲಿ ಚರ್ಚಿಸಿ ನ್ಯಾಯ ಕೊಡಿಸಬೇಕು ಎಂದು ತಿಳಿಸಿದರು. 

ಅಂಬೇಡ್ಕರ್ ಸರ್ಕಲ್ ನಿಂದ ಶಾಸಕರ ಕಾರ್ಯಲಯದವರೆಗೆ ಬೈಕ್ ರಾಲಿ ಮೂಲಕ 
ಮನವಿ ಸಲ್ಲಿಸಿ ಕರ್ನಾಟಕ ರಾಜ್ಯದಲ್ಲಿ 1958 ರಲ್ಲಿ ಸಂವಿಧಾನದ ಪರಿಚ್ಛೇದ 15(4) ಮತ್ತು 16(4)ರಡಿ ಶೈಕ್ಷಣಿಕ ಸಂಸ್ಥೆಗಳ ಪ್ರವೇಶಗಳಲ್ಲಿ ಮತ್ತು ಉದ್ಯೋಗಗಳ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ.5, ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.3 ರಷ್ಟು ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜನಸಂಖ್ಯೆ ಅನುಕ್ರಮವಾಗಿ ಶೇಕಡ 17.15 ಮತ್ತು ಶೇಕಡ 7 ರಷ್ಟಾಗಿರುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸುವ ಸಂಬಂಧ ರಾಜ್ಯ ಸರಕಾರವು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ ದಾಸ್ ರವರ ಆಯೋಗವು ನೀಡಿರುವ ವರದಿಯನ್ನು ಜಾರಿ ಮಾಡಲು ಒತ್ತಾಯಿಸಿ ಕಳೆದ
 211 ದಿನಗಳಿಂದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿಯವರು ಬೆಂಗಳೂರಿನ ಫ್ರೀಡಮ್ ಪಾರ್ಕನಲ್ಲಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.ಈ ವಿಷಯವು ವಿಧಾನ ಸಭೆ/ವಿಧಾನ ಪರಿಷತ್‌ ಕಲಾಪಗಳನ್ನು ಸಹ ಚರ್ಚೆಗೆ ಬಂದಿರುತ್ತದೆ. ಆದರೆ ಇದುವರೆಗೆ ಸಂವಿಧಾನಾತ್ಮಕವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ಸರಕಾರ ಆದೇಶ ಹೊರಡಿಸಿರುವುದಿಲ್ಲ. ಆದುದರಿಂದ ತಾವು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್
ರವರ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಆಯೋಗವು ನೀಡಿರುವ ವರದಿಯನ್ನು ಜಾರಿ ಜಾತಿಯವರಿಗೆ ಶೇ.15 ರಿಂದ 17 ಮತ್ತು ಪರಿಶಿಷ್ಟ ಪಂಗಡದವರಿಗೆ ಶೇಕಡ 3 ರಿಂದ ಶೇಕಡ 7.5ಕ್ಕೆ ಹೆಚ್ಚಿಸುವಂತೆ ಮಾನ್ಯ ಮುಖ್ಯ ಮಂತ್ರಿಗಳಿಗೆ ಒತ್ತಾಯಿಸಬೇಕೆಂದು ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ತಾವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬುಡ್ಡಪ್ಪ ನಾಯಕ, ಚಿನ್ನಪ್ಪ ಪಟ್ಟದಕಲ್ಲ, ಪಿ.ರವಿಕುಮಾರ, ಜೆಎಚ್ ದೇವರಾಜ್, ಹನುಮೇಶ್ ಜೀನೂರು, ಶರಣಪ್ಪ ಮೇಧಾ, ಹನುಮೇಶ ನಾಯಕ್ ಸದಾಪೂರ್,
ಹನುಮಂತ ಕೋಟೆ,ಹನುಮಂತಪ್ಪ ಸೀಕಲ್, ಬಸವರಾಜ್ ಭಜಂತ್ರಿ, ವೆಂಕಟೇಶ್ ಭಜಂತ್ರಿ, ಪರಶುರಾಮ್ ಬಾಗಲವಾಡ, ಬಸವರಾಜ್ ನಕ್ಕುಂದಿ, ಸೇರಿದಂತೆ ಎಸ್ಸಿ ಎಸ್ಟಿ ಸಮುದಾಯದ ಹಲವು ಹೋರಾಟಗಾರರು ಸಮಾಜದ ಹಿರಿಯರು ಯುವಕರು ಉಪಸ್ಥಿತರಿದ್ದರು.

Post a Comment

0Comments

Post a Comment (0)