ಮಾನವಿ, ಸೆ. 19 : ತಾಲೂಕಿನ ಕಾಕತೀಯ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ 17 ವರ್ಷ ವಯೊಮಿತಿ ಒಳಗಿನ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪೈನಲ್ ಪಂದ್ಯದಲ್ಲಿ ಮಸ್ಕಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಹಾಲಾಪೂರಿನ ಬಾಲಕಿಯರ ತಂಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮಾನವಿ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.ಆಯ್ಕೆಯಾದ ಬಾಲಕಿಯರಿಗೆ ಮಾನವಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ್ ದೊಡ್ಡಮನಿ ಪ್ರಶಸ್ತಿ ಮತ್ತು ಪ್ರಮಾಣ ಪತ್ರ ವಿತರಿಸಿ ಮುಂದಿನ ಜಿಲ್ಲಾ ಮಟ್ಟದ ಕ್ರೀಡೆಗೆ ಶುಭ ಹಾರೈಸಿದರು.ಹಾಲಾಪೂರು ಶಾಲೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿನಿಯರಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ವೀರಭದ್ರ ತಾತ ಹಾಗೂ ಸರ್ವ ಸದಸ್ಯರು, ಮುಖ್ಯೋಪಾಧ್ಯಾಯರಾದ ಸುಭಾಷ್ ಸಿಂಗ್ ಹಜಾರಿ ಶಿಕ್ಷಕರು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ರವೀಂದ್ರ ಹಾಗೂ ಗ್ರಾಮದ ಮುಖಂಡರು, ಪಾಲಕರು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.