ಮಸ್ಕಿ, ಸೆ.16 : ಪಟ್ಟಣದ ಮೆಟ್ರಿಕ್ ನಂತರದ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ತಹಶೀಲ್ದಾರರ ಕಾರ್ಯಾಲಯದ ಎದುರು ನಿಲಯ ಪಾಲಕ ಸಿದ್ದಾರ್ಥ್ ಮತ್ತು ವ್ಯವಸ್ಥೆಯ ವಿರೋಧಿಸಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆ ನಿರತರಾದ ವಿದ್ಯಾರ್ಥಿಗಳ ಸಮಸ್ಯೆಗೆ
ಕೂಡಲೇ ಸ್ಪಂದಿಸಿದ ಶಿರಸ್ತೇದಾರ್ ವಿಜಯಕುಮಾರ್ ಸಜ್ಜನ್ ಮೆಟ್ರಿಕ್ ನಂತರದ ಅಂಬೇಡ್ಕರ್ ವಸತಿ ನಿಲಯಕ್ಕೆ ದಿಢೀರನೆ ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಅಧಿಕಾರಿಗಳಾದ ರಾಜೇಂದ್ರ ಕುಮಾರ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಅಧಿಕಾರಿಗಳ ಜೊತೆ ಚರ್ಚಿಸಿ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳನ್ನು ಕೂಡಲೇ ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಹೋರಾಟವನ್ನು ಹಿಂಪಡೆದು ಶಿರಸ್ತೇದಾರ್ ವಿಜಯ ಕುಮಾರ ಸಜ್ಜನ್ ರವರಲ್ಲಿ ಮನವಿ ಪತ್ರ ಸಲ್ಲಿಸಿದರು.
ಈ ವೇಳೆಯಲ್ಲಿ ಎಸ್.ಎಫ್ ಐ ವಿದ್ಯಾರ್ಥಿ ಸಂಘಟನೆಯ ಮುಖಂಡರಾದ ಬಸವರಾಜ್ ಹಿರೇ ಕಡಬೂರು, ಪ್ರಭಾರಿ ಸಮಾಜ ಕಲ್ಯಾಣ ಅಧಿಕಾರಿಗಳು ರಾಜೇಂದ್ರ ಪ್ರಸಾದ್ ಲಿಂಗಸ್ಗೂರು,ಶರಣಪ್ಪ ನಿಲಯಪಾಲಕರು, ರಕ್ಷಣೆ ಒದಗಿಸಲು ಬಂದಿದ್ದ ಪೋಲೀಸ್ ಸಿಬ್ಬಂದಿ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಇದ್ದರು.