ಬೆಂಗಳೂರು ಸೆ.10 : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಹೈ ಕೋರ್ಟ್ ಎಸಿಬಿ ರದ್ದುಗೊಳಿಸಿ ಆದೇಶ ಹೊರಡಿಸಿದ ತಿಂಗಳ ಬಳಿಕ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭ್ರಷ್ಟಾಚಾರ ನಿಗ್ರಹ ದಳವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಇದನ್ನು ರಚನೆ ಮಾಡಲಾಗಿತ್ತು. ಇತ್ತಿಚೇಗೆ ಎಸಿಬಿಯಲ್ಲೆ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಕೇಳಿ ಬಂದಿತ್ತು.