ಹೆಬ್ಬಾಳ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಮಹಿಳೆ ಮೃತ ದೇಹ ಪತ್ತೆ....!

Udayavani News
0
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಮಹಿಳೆಯೊಬ್ಬರ ಮೃತ ದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ರೇಣುಕಾ ಪರಮಣ್ಣ (26) ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬಹಿರ್ದೆಸೆಗೆಂದು ತೆರಳಿ, ಮನೆಗೆ ವಾಪಸ್ ಬಾರದಿರುವಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಗುರುವಾರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇನ್ನೂ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. 

ಸ್ಥಳಕ್ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿತ್ವಿಕ್ ಶಂಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು.

 ಹುಣಸಗಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಿಲ್ಲಾ ವರದಿಗಾರರು : ಶಿವು ರಾಠೋಡ 

Post a Comment

0Comments

Post a Comment (0)