ಹುಬ್ಬಳ್ಳಿ ಜ.16.2025: ಎಲ್ಲರ ಮೆಚ್ಚಿನ ಸ್ಕೋಡಾ ಈಗ ಹೊಸದೊಂದು ದಾಖಲೆ ಮಾಡಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳಿಂದ ಜನರ ಪ್ರೀತಿಗೆ ಪಾತ್ರವಾಗಿದ್ದ ಸ್ಕೋಡಾ ಕೈಲಾಕ್ ಸುರಕ್ಷತಾ ಪರೀಕ್ಷೆ ಅಂದರೆ ಕ್ರಾಶ್ ಟೆಸ್ಟ್ ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ.
ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ಈ 'ಸ್ಕೋಡಾ ಕೈಲಾಕ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯಲ್ಲಿ ವಯಸ್ಕರ ಸುರಕ್ಷತಾ ವ್ಯವಸ್ಥೆಯಲ್ಲಿ 32ಕ್ಕೆ 30.88 ಅಂಕ ಪಡೆದರೆ, ಮಕ್ಕಳ ಸುರಕ್ಷತಾ ವ್ಯವಸ್ಥೆಯಲ್ಲಿ 49ಕ್ಕೆ 45 ಅಂಕಗಳನ್ನು ಪಡೆದಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ.
ಈ ಬಗ್ಗೆ ಸಂತಸ ಹಂಚಿಕೊಂಡಿರುವ ಸ್ಕೋಡಾ ಇಂಡಿಯಾ ಬ್ರ್ಯಾಂಡ್ ಡೈರೆಕ್ಟರ್, ಪೆಟರ್ ಜನೇಬ , ಸುರಕ್ಷತೆ ಎಂಬ DNAಯನ್ನು ಸ್ಕೋಡಾ 2008ರಿಂದಲೂ ಮುಂದುವರಿಸಿಕೊಂಡು ಬಂದಿದೆ. ಸ್ಕೋಡಾ ಕಾರುಗಳು ಜಾಗತಿಕ ಮಟ್ಟದಲ್ಲಿ ಮತ್ತು ಭಾರತದಲ್ಲಿಯೂ 5-ಸ್ಟಾರ್ ಸುರಕ್ಷತಾ ರೇಟಿಂಗ್ ಹೊಂದಿದ್ದು ಕ್ರ್ಯಾಶ್ ಪರೀಕ್ಷೆಗೆಯಲ್ಲಿ ತನ್ನ ಸಾಮರ್ಥ್ಯ ತೋರಿಸಿವೆ. ನಮ್ಮ ಆಧುನಿಕ ತಂತ್ರಜ್ಞಾನವನ್ನು ತೆರೆದಿರಿಸಿವೆ ಎಂದು ತಿಳಿಸಿದರು.
ಈ ಎಸ್‌ಯುವಿ ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡಿಕೊಂಡು ಬಂದಿದೆ.