ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು, ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂ. ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಸಂಗ್ರಹಕ್ಕೆ ಹೆಚ್ಚು ಆಧ್ಯತೆ ನೀಡಲಾಗಿದೆ. 2025-26 ರಲ್ಲಿ ಗಣಿ, ಭೂ ಇಲಾಖೆಯಿಂದ 9000 ಕೋಟಿ ತೆರಿಗೇಯತರ ರಾಜಸ್ವ ಗುರಿ ಹೊಂದಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ಬಜೆಟ್ ನಲ್ಲಿ ಬೆಂಗಳೂರು ಸುರಂಗ ರಸ್ತೆ ಮಾರ್ಗ ಪ್ರಸ್ತಾಪವಾಗಿದೆ. 4೦ ಸಾವಿರ ಕೋಟಿ ಅಂದಾಜು ವೆಚ್ಚದಲ್ಲಿ ಉತ್ತರ- ದಕ್ಷಿಣ ಮತ್ತು ಪೂರ್ವ- ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್ ಗಳನ್ನ ಕಾಮಗಾರಿ ಕೈಗೊಳ್ಳಲು ಅನುಕೂಲವಾಗುವಂತೆ 19 ಸಾವಿರ ಕೋಟಿ ಮೀಸಲಿಡಲಾಗಿದೆ.
ಬೆಂಗಳೂರು : ಸಿಎಂ ಸಿದ್ದರಾಮಯ್ಯ 16ನೇ ಆಯವ್ಯಯ ಮಂಡಿಸುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಗಾತ್ರದ ಬಜೆಟ್ ಇದಾಗಿದೆ.
ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಟ್ಟು ಎಲ್ಲಾ ಇಲಾಖೆಗಳಿಗೂ ಸಮಾನ ಅನುದಾನ ಹಂಚಿಕೆ ಮಾಡಿದ್ದಾರೆ.
ಯಾವ್ಯಾವ ಇಲಾಖೆಗೆ ಎಷ್ಟೆಷ್ಟು..?
ಕೃಷಿ ಇಲಾಖೆ - 51,339 ಕೋಟಿ
ಶಿಕ್ಷಣ ಇಲಾಖೆ 45,286 ಕೋಟಿ
ಇಂಧನ ಇಲಾಖೆ - 26,896 ಕೋಟಿ
ನೀರಾವರಿ - 22,181 ಕೋಟಿ
ಆರೋಗ್ಯ -17, 473 ಕೋಟಿ
ಕಂದಾಯ - 17, 201 ಕೋಟಿ
ಸಮಾಜ ಕಲ್ಯಾಣ -16, 955 ಕೋಟಿ
ಇದಲ್ಲದೆ ಬರೀ ಗ್ಯಾರಂಟಿ ಯೋಜನೆ ಜಾರಿಗೆ ಬರೋಬ್ಬರಿ 51034 ಕೋಟಿ ಮೀಸಲಿಡಲಾಗಿದೆ.