ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ

Udayavani News
0
ತಿಂಗಳಾಂತ್ಯಕ್ಕೆ ನಿವೇಶನ ಹಂಚಿಕೆ: ಸಚಿವ ಮುನಿಯಪ್ಪ* 


ಬೆಂ.ಗ್ರಾ.ಜಿಲ್ಲೆ,  : ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ತಿಂಗಳಾಂತ್ಯದಲ್ಲಿ ಏಕಕಾಲಕ್ಕೆ ನಿವೇಶನ ಹಂಚಿಕೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ 
ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

   ಇಂದು ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಕುಂದಾಣ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿ ಜಿಲ್ಲೆಯ ಅಭಿವೃದ್ಧಿಗೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನ ಕೈಗೆತ್ತಿಕೊಳ್ಳಲಾಗಿದೆ. ಬಡವರಿಗೆ, ಹಿಂದುಳಿದವರಗೆ ನಿವೇಶನ ಹಾಗೂ ಮನೆ ನೀಡಲು ಈಗಾಗಲೇ ಸಿದ್ಧತೆ ನಡೆಸಲಾಗಿದ್ದು, ತಿಂಗಳಾಂತ್ಯಕ್ಕೆ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಬಡವರಿಗೆ ನಿವೇಶನ ನೀಡಲಾಗುವುದು ಎಂದರು.

ಜನಪರವಾದ, ರೈತರ ಪರವಾದ, ಬಡವರ ಪರವಾದ, ಎಲ್ಲಾ ವರ್ಗದ ಪರವಾದ, ಎಲ್ಲಾ ಜಿಲ್ಲೆಗಳಿಗೂ ಸಮಾನ ಅವಕಾಶ ನೀಡಿರುವ ಒಳ್ಳೆಯ ಬಜೆಟ್ ಅನ್ನು ಮಾನ್ಯ ಸಿದ್ದರಾಮಯ್ಯ ಅವರು ನೀಡಿದ್ದಾರೆ. ದೇವನಹಳ್ಳಿಗೆ ಮೆಟ್ರೋ ವಿಸ್ತರಣೆ, ಜಿಲ್ಲಾ ಕ್ರೀಡಾಂಗಣ, ಕೆರೆಗೆ ನೀರು ತುಂಬಿಸುವುದು, ರಸ್ತೆಗಳ ಅಭಿವೃದ್ಧಿಗೆ ಸೇರಿದಂತೆ ಹಲವು ಯೋಜನೆಗಳನ್ನು ಜಿಲ್ಲೆಗೆ ನೀಡಿದ್ದಾರೆ. ಸರ್ಕಾರ ಡಿಸಿಸಿ ಬ್ಯಾಂಕ್ ಗಳಲ್ಲಿ ಬಡ್ಡಿ ರಹಿತ ಸಾಲ ನೀಡುವ ಯೋಜನೆ ಜಾರಿಗೆ ತಂದಿದ್ದು ರೈತರು, ಸ್ವಸಹಾಯ, ಸ್ತ್ರೀ ಶಕ್ತಿ ಸಂಘಗಳು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರಹಳ್ಳಿ, ಕೊಯಿರಾ, ವಿಶ್ವನಾಥಪುರ, ಕುಂದಾಣ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶಾಲೆಗಳ‌‌ ಅಭಿವೃದ್ದಿ, ಶಿಕ್ಷಣ, ರಸ್ತೆ ಸೌಕರ್ಯ, ಸ್ವಚ್ಛತೆ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಗುದ್ದಲಿಪೂಜೆ ಹಾಗೂ ಗ್ರಾಮ ಪಂಚಾಯಿತಿಗಳ ಹೈ-ಮಾಸ್ಕ್ ಲೈಟ್, ಅಂಗಡಿ ಮಳಿಗೆಗಳು, ಮಲ ತ್ಯಾಜ್ಯ ಘಟಕ, ಅರಿವು ಕೇಂದ್ರವನ್ನು ಉದ್ಘಾಟಿಸಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕುಂದಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ಭಿಣಿಯರಿಗೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬಯಪಾ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಜಗನ್ನಾಥ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ ಸೇರಿದಂತೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾದ್ಯಾಕ್ಷರು, ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Post a Comment

0Comments

Post a Comment (0)