ಬಾಗೇಪಲ್ಲಿ ತಾಲ್ಲೂಕು ಕ್ರೀಡಾಂಗಣದ ಸೌಲಭ್ಯಗಳ ಉನ್ನತೀಕರಣ- ಸಚಿವ ಬೈರೇಗೌಡ

Udayavani News
0
ಬೆಂಗಳೂರು, : ಬಾಗೇಪಲ್ಲಿ ತಾಲ್ಲೂಕಿನ ಕ್ರೀಡಾಂಗಣದ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2024-25ನೇ ಸಾಲಿಲ್ಲಿ ರೂ. 300.00ಲಕ್ಷ ವೆಚ್ಚದಲಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ಬಾಗೇಪಲ್ಲಿ ಶಾಸಕರಾದ ಸುಬ್ಬಾರೆಡಡಿ ಎಸ್.ಎನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಗೇಪಲ್ಲಿ ತಾಲ್ಲೂಕು ಕ್ರೀಡಾಂಗಣದ ಸೌಲಭ್ಯಗಳ ಉನ್ನತೀಕರಣಕ್ಕಾಗಿ ಈಗಾಗಲೇ ಇರುವ ಸೌಲಭ್ಯಗಳ ಜೊತೆಗೆ ಬೋರ್ ವೆಲ್ ಕೊರೆದು, ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವುದು, ಕಾಂಪೌಂಡ್ ಗೋಡೆ ನಿರ್ಮಾಣ, ಮಳೆ ನೀರು ಚರಂಡಿ ನಿರ್ಮಿಸುವುದರ ಜೊತೆಗೆ ಗುಡಿಬಂಡೆ ತಾಲ್ಲೂಕಿನ ಅಮಾನಿಬೈರ ಸಾಗರ ಗ್ರಾಮದಲ್ಲಿ 6.00 ಎಕರೆ ನಿವೇಶವನ್ನು ಗುರುತಿಸಿದ್ದು, ತಾಲ್ಲೂಕು ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಹಸ್ತಾಂತರ ಮಾಡಾಗಿದ್ದು ಇದನ್ನು ಇಲಾಖೆಯ ವಶಕ್ಕೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರು ವಿಧಾನಸಭೆಯಲ್ಲಿ ಉತ್ತರಿಸಿದರು

Post a Comment

0Comments

Post a Comment (0)