ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ: ವಿಧಾನ ಪರಿಷತ್ ಸದಸ್ಯ ಡಾ.ಎಸ್ ಯತೀಂದ್ರ
March 05, 2025
0
ಬೆಂಗಳೂರು : ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಐದು ಗ್ಯಾರೆಂಟಿ ಯೋಜನೆಗಳಿಗೆ ಸುಮಾರು 70,000 ಕೋಟಿ ರೂಗಳನ್ನು ಜನರ ಖಾತೆಗಳಿಗೆ ನೇರವಾಗಿ ವರ್ಗಾಯಿಸಿದೆ. ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ ಎಂದು ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ.ಎಸ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಘನತೆವೆತ್ತ ರಾಜ್ಯಪಾಲರು ಮಾರ್ಚ್ 3 ರಂದು ವಿಧಾನ ಮಂಡಲದ ಉಭಯ ಸದನದ ಸದಸ್ಯರನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ವಂದನಾರ್ಪಣಾ ಪ್ರಸ್ತಾವ ಸಲ್ಲಿಸಿ ಮಾತನಾಡಿದರುಅನ್ನಭಾಗ್ಯ ಯೋಜನೆಯಡಿ 1,28,48,173 ಪಡಿತರ ಚೀಟಿಗಳ ಒಟ್ಟು 4,48,41,976 ಫಲಾನುಭವಿಗಳಿಗೆ ಆಹಾರ ಧಾನ್ಯ ಹಂಚಿಕೆ ಮಾಡಲಾಗಿದೆ. ಆಹಾರ ಖಾತ್ರಿ ಯೋಜನೆಯಡಿ 5 ಕೆ.ಜಿ. ಧಾನ್ಯಗಳನ್ನು ನೀಡುವುದರ ಜೊತೆಗೆ ಉಳಿದ 5 ಕೆಜಿಗೆ ಬದಲಾಗಿ ತಿಂಗಳಿಗೆ ತಲಾ 170 ರೂಗಳನ್ನು ನೀಡಲಾಗುತ್ತಿತ್ತು.ಈಗ ಭಾರತೀಯ ಆಹಾರ ನಿಗಮ ಅಕ್ಕಿ ನೀಡಲು ಒಪ್ಪಿರುವುದರಿಂದ ತಲಾ 10 ಕೆಜಿ ಆಹಾರ ಧಾನ್ಯ ನೀಡಲು ಪ್ರಾರಂಭ ಮಾಡಲಾಗುತ್ತಿದೆ ಎಂದರುರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ 2000 ಗಳನ್ನು ನೀಡಲಾಗುತ್ತಿದೆ. ಸದರಿ ಯೋಜನೆ ಪ್ರಾರಂಭವಾದಾಗಿನಿಂದ ಈವರೆಗೆ 1,26,24,547 ಮಹಿಳಾ ಫಲಾನುಭವಿಗಳಿಗೆ ಒಟ್ಟು 36,000 ಕೋಟಿ ರೂ.ಗಳನ್ನು ಇವರ ಖಾತೆಗಳಿಗೆ ನೇರ ಜಮಾ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಲಾಗಿದೆ. ಗೃಹಜ್ಯೋತಿ" ಯೋಜನೆಯಡಿ ಪ್ರಸ್ತುತ 1.62 ಕೋಟಿ ಗ್ರಾಹಕರು ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಆಗಸ್ಟ್-2023 ರಿಂದ ಜನವರಿ-2025 ರವರೆಗೆ ಒಟ್ಟಾರೆ 17290 ಕೋಟಿ ರೂ.ಗಳ ಬೃಹತ್ ಸಹಾಯಧನವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಿಡುಗಡೆ ಮಾಡಲಾಗಿದೆ.ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಶಕ್ತಿ ಯೋಜನೆ' ಮಹಿಳೆಯರನ್ನು ಸಬಲೀಕರಣದ ಕಡೆಗೆ ಮುನ್ನಡೆಸುತ್ತಿದೆ. ಸದರಿ ಯೋಜನೆ ಪ್ರಾರಂಭವಾದಾಗಿನಿಂದ ದಿನಾಂಕ:17.01.2025 ರವರೆಗೆ ರಾಜ್ಯದ ಸುಮಾರು 376.70 ಕೋಟಿ ಫಲಾನುಭವಿಗಳು ಪ್ರಯೋಜನ ಪಡೆದಿರುತ್ತಾರೆ. ಈ ಉದ್ದೇಶಕ್ಕಾಗಿ ಸರ್ಕಾರ ರೂ.8215 ಕೋಟಿ ಅನುದಾನವನ್ನು ಹಂಚಿಕೆ ಮಾಡಿದೆ. "ಯುವನಿಧಿ" ಯೋಜನೆ ಅಡಿಯಲ್ಲಿ 2,23,883 ಅಭ್ಯರ್ಥಿಗಳು ನೋಂದಾಯಿಸಿ ಕೊಂಡಿದ್ದು, 1,65,014 ಅರ್ಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದರು.ಒಟ್ಟಾರೆಯಾಗಿ 2024-25 ನೇ ಸಾಲಿನ ಬಜೆಟ್ ನಲ್ಲಿ ಆದೇಶ ಹೊರಡಿಸಬೇಕಿದ್ದ 344 ಘೋಷಣೆಗಳ ಪೈಕಿ 331 ಕ್ಕೆ ಸರ್ಕಾರಿ ಆದೇಶ ಹೊರಡಿಸಲಾಗಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಒಟ್ಟಾರೆಯಾಗಿ 39,121 ಕೋಟಿ ಹಂಚಿಕೆ ಮಾಡಿ ಖರ್ಚು ಮಾಡಲಾಗುತ್ತಿದೆ ಎಂದರುಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನ ಯಶಸ್ವಿಯಾಗಿದ್ದು, 10.27 ಲಕ್ಷ ಕೋಟಿ ರೂಗಳನ್ನು ರಾಜ್ಯದಲ್ಲಿ ಹೂಡಿಕೆ ಮಾಡಲು ಒಡಂಬಡಿಕೆಗಳಾಗಿವೆ. ಇದೊಂದು ಹೊಸ ದಾಖಲೆಯಾಗಿದೆ ಎಂದು ನುಡಿದರು
Tags