
ಬಪ್ಪರಗಿ : ಸುರಪುರ ಮತಕ್ಷೇತ್ರದ ಹುಣಸಗಿ ತಾಲೂಕಿನ ಬಪ್ಪರಗಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ಹಲವಾರು ಮನೆಗಳಿಗೆ ಹಾನಿಯಾಗಿ ಕರಿಕಲಪ್ಪ ತಂದೆ ಹಣಮಂತ್ರಾಯ ತುಂಬಗಿ ಮೃತಪಟ್ಟಿದ್ದ ಸುದ್ದಿ ತಿಳಿದ ಇಂದು ಸುರಪುರ ಮತಕ್ಷೇತ್ರದ ಶಾಸಕರಾದ ರಾಜಾ ವೇಣುಗೋಪಾಲ ನಾಯಕರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆದ ಘಟನೆಗೆ ಸರಕಾರದಿಂದ ಬರತಕಂತ ಪರಿಹಾರ ಕಲ್ಪಿಸುವ ಕೆಲಸ ಮಾಡುವದಾಗಿ ಭರವಸೆ ನೀಡಿ,ಗ್ರಾಮದಲ್ಲಿ ಸಂಭವಿಸಿದ ಘಟನೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಗಳು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಊರಿನ ಎಲ್ಲ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ