ಬೆಂಗಳೂರು.27 : ಕೆಂಪೇಗೌಡ ಅಭಿವೃದ್ದಿ ಪ್ರಾಧಿಕಾರ ಹಾಗೂ ಕನ್ನಡ ಮತ್ತ ಸಂಸ್ಕೃತಿ ಇಲಾಖೆ ವತಿಯಿಂದ ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ ಕ್ರಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪೂಜ್ಯ ಸ್ವಾಮೀಜಿಗಳಾದ ಶೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಶೀ ಶ್ರೀ ನಂಜಾವದೂತ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರೊಂದಿಗೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಭಾಗವಹಿಸಿ ಕ್ರಾರ್ಯಕ್ರಮವನ್ನು ಉಘ್ಟಾಟಿಸಿದರು .
ಈ ಸಂದರ್ಭದಲ್ಲಿ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವರಾದ ಕೃಷ್ಣಬೈರೇಗೌಡ, ಎಚ್.ಸಿ ಮಹದೇವಪ್ಪ , ಶಿವರಾಜ್ ಎಸ್ ತಂಗಡಗಿ,ಕೆಜೆ.ಜಾರ್ಜ್, ಶಾಸಕಾದ ಬಾಲಕೃಷ್ಣ, ಮುನಿರತ್ನ,ಎಸ್.ಟಿ ಸೋಮಶೇಖರ್, ವಿಧಾನಪರಿಷತ್‌ನ ಶಾಸಕರಾದ ನಾಗರಾಜು ಯಾದವ್,ಪುಟ್ಟಣ್ಣ ಬೊಮುಲ್ ನ ಅಧ್ಯಕ್ಷರಾದ ಡಿ.ಕೆ ಸುರೇಶ್ , ಕೆಂಪೇಗೌಡ ಪ್ರಾಧಿಕಾರದ ಸದಸ್ಯರು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.