ಆಶ್ರಯ ಲೇಔಟ್ ಅಕ್ರಮ ಒತ್ತುವರಿ ತೆರವಿಗೆ ಕ್ರಮ ಲಲಿತಾ ಅನಪೂರ.

Udayavani News
0
ಯಾದಗಿರಿ : ನಗರದ ಆಶ್ರಯ ಲೇಔಟ್ ಅಕ್ರಮ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಕು.ಲಲಿತಾ ಮೌಲಾಲಿ ಅನಪೂರ ತಿಳಿಸಿದರು.
ನಗರದ ಪಿಲ್ಟರ್ ಬೆಡ್ ಹಿಂದುಗಡೆಯ ಆಶ್ರಯ ಲೇಔಟ್‌ನಲ್ಲಿ ಅಕ್ರಮವಾಗಿ ಕೆಲವು ನಿವಾಸಿಗಳು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ ಎನ್ನುವ ದೂರನ್ನು ಆಧರಿಸಿ ಶುಕ್ರವಾರ ಬೆಳಗ್ಗೆ ಆಶ್ರಯ ಲೇಔಟ್‌ಗೆ ಸದಸ್ಯರು ಹಾಗೂ ಪೌರಾಯುಕ್ತರ ತಂಡದೊAದಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಿಜವಾದ ಫಲಾನುಭವಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ, ಅಕ್ರಮವಾಗಿ ಆಶ್ರಯ ನಿವೇಶನವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿ ಮಾರಾಟ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಾಗುವುದು, ಇದರಲ್ಲಿ ಯಾವುದೇ ಮುಲಾಜಿ ಇಲ್ಲವೆಂದು ಸ್ಥಳದಲ್ಲಿದ್ದವರಿಗೆ ಹೇಳಿದರು.
ಸ್ಥಳ ಪರಿಶೀಲನೆ ವೇಳೆ ಸುಮಾರು ೩೦ಕ್ಕೂ ಹೆಚ್ಚು ಖಾಲಿ ನಿವೇಶನಗಳು ಕಂಡು ಬಂದರೆ, ಇದೇ ವೇಳೆ ಜೆಸ್ಕಾಂ ಮೇನ್ ಲೈನ್ ವಿದ್ಯುತ್ ಸರಬರಾಜಿಗಾಗಿ ಹಾಕಲಾಗಿರುವು ಹೈಟೆನ್ಸ್ನ್ ವೈರ್ ಕೆಳಗೆ ಕೆಲವು ಜನರು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಕುಪಿತರಾದ ಅಧ್ಯಕ್ಷರು, ಇಂತಹ ಅಪಾಯ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡಿದ್ದೀರಿ, ಇದರಿಂದ ಅನಾಹುತವಾದರೆ ಯಾರು ಹೊಣೆ ಕೂಡಲೇ ಜೆಸ್ಕಾಂ ಇಲಾಖೆಗೆ ಪತ್ರ ಬರೆದು ಕ್ರಮಕೈಗೊಳ್ಳವಂತೆ ಸ್ಥಳದಲ್ಲಿದ್ದ ಪೌರಾಯುಕ್ತ ಉಮೇಶ ಚವ್ಹಾಣ ಅವರಿಗೆ ಸೂಚಿಸಿದರು.
ಆಶ್ರಯ ಲೇಔಟ್‌ನಲ್ಲಿ ಯಾರೂ ಅತಿಕ್ರಮಿಸಬಾರದು, ಒಂದು ವೇಳೆ ಯಾರಾದರೂ ಅಕ್ರಮವಾಗಿ ಲೇಔಟ್‌ನಲ್ಲಿ ಮನೆ ನಿರ್ಮಿಸಿಕೊಂಡಿದ್ದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು, ಹೈಟೆನ್ಸ್ನ್ ವೈರ್ ಕೆಳಗಡೆ ಮನೆ ನಿರ್ಮಿಸಿಕೊಂಡವರು ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ರುಖಿಯಾ ಬೇಗಂ, ಸದಸ್ಯರಾದ ವಿಜಯಲಕ್ಷಿö್ಮÃ, ಮಂಜುನಾಥ ದಾಸನಕೇರಿ, ಅಂಬಯ್ಯ ಶಾಬಾದಿ, ಚನ್ನಕೇಶಗೌಡ ಬಾಣತಿಹಾಳ, ಮಶೆಪ್ಪ ನಾಯಕ, ಹಣಮಂತ ನಾಯಕ, ಹಣಮಂತ ಇಟಗಿ, ವಾಹಬ್, ಇಸ್ಮಾಯಿಲ್‌ಖಾನ್, ವೆಂಕಟರಡ್ಡಿ ಹೊನಕೇರಿ, ಮನ್ಸೂರ್ ಅಹ್ಮದ್, ಗಣೇಶ ದುಪ್ಪಲ್ಲಿ, ಖಲೀಂ, ಚಂದ್ರಕಾAತ ಮಡ್ಡಿ, ನಗರಸಭೆ ಎಇಇ ರಜನಿಕಾಂತ ಶೃಂಗೇರಿ, ಪರಿಸರ ಅಭಿಯಂತರ ಪ್ರಶಾಂತ, ಕಂದಾಯ ಅಧಿಕಾರಿ ಅಂಬಿಕೇಶ್ವರ, ಮಲ್ಲಿಕಾರ್ಜುನ ಕುರಕುಂಬಳ ಸೇರಿದಂತೆ ನಗರಸಭೆ ಸಿಬ್ಬಂದಿಗಳು ಇದ್ದರು.

Post a Comment

0Comments

Post a Comment (0)