ಜೀವ ಮತ್ತು ಜೀವನಕ್ಕಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ: ಎಸ್ಪಿ ಡಾ.ಶೋಭಾರಾಣಿ ವಿ.ಜೆ

Udayavani News
0
ಬಳ್ಳಾರಿ,ಜೂ :
ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಹೇಳಿದರು.
ನಗರದ ಕನಕದುರ್ಗಮ್ಮ ದೇವಸ್ಥಾನ ವೃತ್ತದಲ್ಲಿ ಎಸ್ಪಿ ಶುಕ್ರವಾರ ಆಯೋಜಿಸಲಾಗಿದ್ದ ಸಾರ್ವಜನಿಕರ ಸುರಕ್ಷತೆಗಾಗಿ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹೆಲ್ಮೆಟ್ ಮತ್ತು ಗುಲಾಬಿ ಹೂ ವಿತರಿಸಿ ಅವರು ಮಾತನಾಡಿದರು.
ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು. ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪಿರುವರ ಸಂಖ್ಯೆ ಹೇರಳವಾಗಿದೆ. ಆ ವೇಳೆ ತಲೆಗೆ ಪೆಟ್ಟಾಗಿ ಸಾವನ್ನಪ್ಪಿರುವವರು ಹೆಚ್ಚಾಗಿದ್ದಾರೆ. ಇದಕ್ಕೆ ಹೆಲ್ಮೆಟ್ ಧರಿಸದಿರುವುದೇ ಮುಖ್ಯ ಕಾರಣ. ಹಾಗಾಗಿ ನಿಮ್ಮ ಮನೆಯವರು ಹಾಗೂ ನಿಮ್ಮನ್ನು ನಂಬಿದವರಿಗಾಗಿ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಲೇಬೇಕು ಎಂದು ಹೇಳಿದರು.
ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದರಿಂದ ಸಂಭವನೀಯ ಅಪಘಾತಗಳಿಂದ ತಲೆಗೆ ಪೆಟ್ಟಾಗುವುವುದು ತಪ್ಪುತ್ತದೆ. ಪೊಲೀಸರು ನೀಡುವ ಸೂಚನೆಗಳನ್ನು ಅಗತ್ಯವಾಗಿ ಪಾಲಿಸಬೇಕು. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಸ್ಥಳದಲ್ಲಿಯೇ ರೂ.500 ದಂಡ ತೆರಬೇಕಾಗುತ್ತದೆ. 18 ವರ್ಷದ ಒಳಗಿನವರು ವಾಹನ ಚಲಾಯಿಸುವುದು ಕೂಡ ಅಪರಾಧ. ಹಾಗಾಗಿ ಕಡ್ಡಾಯವಾಗಿ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದರು.
*ಸುರಕ್ಷತೆಗಾಗಿ ಹೆಲ್ಮೆಟ್ ಧರಿಸೋಣ:*
ದ್ವಿಚಕ್ರ ವಾಹನ ಚಲಾಯಿಸುವ ಪ್ರತಿಯೊಬ್ಬರೂ ಹೆಲ್ಮೆಟ್ ಬಳಸುವ ರೂಢಿಯಾಗಬೇಕೆಂದರೆ ಅಧಿಕಾರಿಗಳು ಸೇರಿದಂತೆ ನಾವೆಲ್ಲರೂ ನಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾಧ್ಯಮ ಪ್ರತಿನಿಧಿಗಳ ಸಂವಾದದಲ್ಲಿ ಹೇಳಿದರು.
ಜಿಲ್ಲೆಯಲ್ಲಿ ಅತಿಯಾಗ ವೇಗದಿಂದ ವಾಹನ ಚಾಲನೆ, ಮದ್ಯ ಸೇವಿಸಿ-ವಾಹನ ಚಾಲನೆ ಮತ್ತು ಸಂಚಾರ ನಿಯಮ ಉಲ್ಲಂಘನೆಯಿAದ ಅಪಘಾತ ಮತ್ತು ಸಾವು ಸಂಭವಿಸುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿAದಲೇ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಹಾಗೂ ಹಿಂಬದಿಯ ಸವಾರರು ಸಹ ತಪ್ಪದೇ ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.
ಹೆಲ್ಮೆಟ್ ಧರಿಸುವ ಕುರಿತು ನಮ್ಮಿಂದಲೇ ಪ್ರಾರಂಭಿಸಿದರೆ ಸಾರ್ವಜನಿಕರು ಸಹ ದ್ವಿ-ಚಕ್ರ ಸಂಚಾರದಲ್ಲಿ ಸುರಕ್ಷತೆಗಾಗಿ ಹೆಲ್ಮೆಟ್ ಬಳಕೆ ಕುರಿತು ಸಂದೇಶ ರವಾನಿಸಿದಂತಾಗುತ್ತದೆ. ಹಾಗಾಗಿ ಎಲ್ಲರೂ ತಪ್ಪದೇ ಹೆಲ್ಮೆಟ್ ಬಳಸೋಣ ಎಂದರು.
ಜಿಲ್ಲೆಯಲ್ಲಿ ವಾಹನ ಸವಾರರು ಕಡ್ಡಾಯ ಹೆಲ್ಮೆಟ್ ಧರಿಸುವಿಕೆಯ ಕುರಿತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡಕ್ಕೆ ಆಹ್ವಾನಿಸದಂತೆ, ಇದಕ್ಕೆ ಯಾವುದೇ ವಿನಾಯಿತಿ ಇಲ್ಲ. ಪೊಲೀಸರ ಭಯದ ಕಾರಣಕ್ಕೆ ಯಾರೂ ಹೆಲ್ಮೆಟ್ ಧರಿಸಬೇಕಿಲ್ಲ. ಬದಲಾಗಿ ತಮ್ಮ ಸುರಕ್ಷತೆಗಾಗಿ ಸಾರ್ವಜನಿಕರು ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.
ಹೆಲ್ಮೆಟ್ ಬಳಕೆಯ ಕುರಿತು ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ನವೀನ್ ಕುಮಾರ್, ರವಿಕುಮಾರ್, ಬಳ್ಳಾರಿ ನಗರ ಉಪವಿಭಾಗ ಡಿವೈಎಸ್ಪಿ ಚಂದ್ರಕಾAತ ನಂದಾರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಅಯ್ಯನಗೌಡ ಪಾಟೀಲ್ ಸೇರಿದಂತೆ ಇತರರು ಇದ್ದರು.

Post a Comment

0Comments

Post a Comment (0)