ಬೆಂಗಳೂರು ಕಾಲ್ತುಳಿತ ದುರಂತ : ರಾಜ್ಯ ಸರ್ಕಾರ ವಜಾ ಮಾಡುವಂತೆ ರಾಜ್ಯಪಾಲರಿಗೆ ನಾಳೆ ಬಿಜೆಪಿ ಮನವಿ.!

Udayavani News
0
ಬೆಂಗಳೂರ : ಬೆಂಗಳೂರು ಕಾಲ್ತುಳಿತದ ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ನಾಳೆ ಬಿಜೆಪಿ ಮನವಿ ಮಾಡಲಿದೆ.

ಬೆಂಗಳೂರು ಕಾಲ್ತುಳಿತ ದುರಂತ ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವೇಳೆ ನಾಯಕರು ರಾಜ್ಯ ಸರ್ಕಾರ ವಜಾಗೊಳಿಸುವ ಸಂಬಂಧ ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು, ಎಂಎಲ್ ಸಿಗಳು ಪಾಲ್ಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸುತ್ತಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇನ್ನು ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.

Post a Comment

0Comments

Post a Comment (0)