ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ – ಪ್ರಗತಿ ಸ್ಪಷ್ಟವಾಗಿದೆ ಆದರೆ, ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಪ್ರಯತ್ನಗಳನ್ನು ವೇಗಗೊಳಿಸೋಣ ! ಬಾಲಕಾರ್ಮಿಕತೆಯನ್ನು ಮುಕ್ತಗೊಳಿಸೋಣ) ಎಂಬ ಧ್ಯೆಯವಾಕ್ಯದೊಂದಿಗೆ ಹುಣಸಗಿ ತಾಲ್ಲೂಕಿನಲ್ಲಿ ಹೆಚ್ಚಿನ ಮಕ್ಕಳು ಕೃಷಿ ಹಾಗೂ ಇನ್ನಿತರೆ ಕೆಲಸಗಳಿಗೆ ತೆರಳುತ್ತಿದ್ದು, ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಹಾಗೂ ಅಂಗಡಿಗಳಲ್ಲಿ ಕೆಲಸಕ್ಕೆ ಕಳುಹಿಸದಂತೆ ಪಾಲಕ/ಪೋಷಕರು ಜಾಗೃತಿ ವಹಿಸಬೇಕು ಶ್ರೀ ಎಮ್ ಬಸವರಾಜ ತಹಸೀಲ್ದಾರರು ಹುಣಸಗಿ ರವರ ಅಭಿಮತ.
ಶ್ರೀ ಎಮ್ ಬಸವರಾಜ ತಹಸೀಲ್ದಾರರು ಹುಣಸಗಿ ರವರು ಮಾತನಾಡಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ಮತ್ತು ಕಾರ್ಮಿಕ ಆಯುಕ್ತರು ಬೆಂಗಳೂರು ರವರ ಸೂಚನೆಯಂತೆ, PAN-INDIA Rescue and Rehabilitation Campaign 3.0 by NCPCR on the Occasion of World Day Against Child Labour Programm 2025 ರ ಅಂಗವಾಗಿ – “Progress is Clear, but there’s more to do: Lets Speed up Efforts! End Child Labour”(ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ – ಪ್ರಗತಿ ಸ್ಪಷ್ಟವಾಗಿದೆ ಆದರೆ, ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಪ್ರಯತ್ನಗಳನ್ನು ವೇಗಗೊಳಿಸೋಣ ! ಬಾಲಕಾರ್ಮಿಕತೆಯನ್ನು ಮುಕ್ತಗೊಳಿಸೋಣ) ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕತೆಯಲ್ಲಿ ತೊಡಗಿರುವ ಮಕ್ಕಳನ್ನು ಹಾಗೂ ಬೀದಿ ಪರಿಸ್ಥಿತಿಯಲ್ಲಿರುವ ಮಕ್ಕಳನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ದಿನಾಂಕ: 01-06-2025 ರಿಂದ 31-08-2025ರ ರವರೆಗೆ ರಕ್ಷಣಾ ಕಾರ್ಯಚರಣೆಗೆ ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಹಾಗೂ ಅಂಗಡಿಗಳಲ್ಲಿ ಕೆಲಸಕ್ಕೆ ಕಳುಹಿಸದಂತೆ ಪಾಲಕರು ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ನಂತರ ನಗರದ ತಹಸೀಲ ಕಚೇರಿ ಮಾರ್ಗದಿಂದ ಬಸ್ ನಿಲ್ದಾಣದಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಗ್ಯಾರೇಜ್‌ಗಳು ಮತ್ತು ಹೊಟೇಲ್‌ಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ನೇಮಿಸಿಕೊಳ್ಳದಂತೆ ಜಾಗೃತಿ ಮೂಡಿಸಲಾಯಿತು.
ನಂತರ ಸುರಪುರ ಹಾಗು ಹುಣಸಗಿ ಕಾರ್ಮಿಕ ನಿರೀಕ್ಷಕರಾದ ಶಿವಪ್ಪ ಜಮಾದಾರ್ ಮಾತನಾಡಿ ಬಾಲಕಾರ್ಮಿಕ ಮಕ್ಕಳನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ರೂ, 20,000 ರೂಗಳಿಂದ 50,000 ರೂ ಗಳವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.
ನಂತರ ಮಾತನಾಡಿದ ರಿಯಾಜ್ ಪಟೇಲ್ ಯೋಜನಾ ನಿರ್ದೇಶಕರು ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ (ಸನ ಸೊಸೈಟಿ ಯಾದಗಿರಿ ರವರು ಮಾತನಾಡಿ ಕಾರ್ಮಿಕ ಇಲಾಖೆಯಿಂದ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮ, ಬೀದಿನಾಟಕ ಮತ್ತು ಆಟೋ-ಪ್ರಚಾರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ನೇಮಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ನಂತರ ನಡೆದ ತಪಾಸಣೆ/ಹಠಾತ್ ದಾಳಿ ಸಂಧರ್ಭದಲ್ಲಿ ಉಪ ತಹಸೀಲ್ದಾರರಾದ ಕಲ್ಲಪ್ಪ,
ಮಕ್ಕಳ ಸಹಾಯವಾಣಿ 1098/112 ನ ಸದಾಶಿವ , ಮಾರ್ಗದರ್ಶಿ ಸಂಸ್ಥೆಯ ವಿದ್ಯಾ, ಕಾರ್ಮಿಕ ಇಲಾಖೆಯ ಎಲ್.ಎನ್ ಚೌಧರಿ, ರಮೇಶ್ ಕೆಲ್ಲೂರು, ಬಾಲು ನಾಯಕ ಉಪಸ್ಥಿತರಿದ್ದರು.
ವರದಿಗಾರ : ಶಿವು ರಾಠೋಡ