ಬೆಂಗಳೂರು: ಜುಲೈ 18, ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ "ಮನೆ ಮನೆಗೆ ಪೊಲೀಸ್" ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಗೃಹಇಲಾಖೆ ಹಮಿಕೊಂಡಿದೆ.
ಬೆಂಗಳೂರು ಮಹಾನಗರದಲ್ಲಿ ಈ ದಿನ ಬೆಳಗ್ಗೆ : 10.30 ಕ್ಕೆ ಗೋವಿಂದರಾಜನಗರ ವಾರ್ಡ್‌ನಲ್ಲಿರುವ ಎಂ.ಸಿ ಲೇಔಟ್‌ನಲ್ಲಿ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್, ಡಿಜಿ-ಐಜಿಪಿ, ಡಾ. ಎಂ. ಎ ಸಲೀಮ್, ನಗರ ಪೊಲೀಸ್ ಆಯುಕ್ತರಾದ ಶ್ರೀ ಸೀಮಂತ್ ಕುಮಾರ್ ಸಿಂಗ್ ಅವರು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.
ಪೊಲೀಸ್ ಸೇವೆಗಳ ಪ್ರತಿಯೊಂದು ಸ್ತರದಲ್ಲೂ ಸಾರ್ವಜನಿಕರ ಬೆಂಬಲ ಮತ್ತು ಸಹಭಾಗಿತ್ವ ಸಾಧಿಸಿಕೊಳ್ಳುವುದರಿಂದ ಮಾತ್ರವೇ ಉತ್ಕೃಷ್ಟ ಸೇವೆಯನ್ನು ಒದಗಿಸಲು ಸಾಧ್ಯ. ಈ ನಿಟ್ಟಿನಲ್ಲಿ ಈಗಾಗಲೇ ಪ್ರತಿಯೊಂದು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಬ್-ಬೀಟ್‌ಗಳನ್ನಾಗಿ ವಿಂಗಡಿಸಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ಇನ್ನು ಮುಂದೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆ ಮನೆಗೂ ಭೇಟಿ ನೀಡಿ ಸಾರ್ವಜನಿಕರ ದೂರುಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಿದ್ದಾರೆ.
'ಮನೆ ಮನೆಗೆ ಪೊಲೀಸ್' ಕಾರ್ಯಕ್ರಮದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಮುಕ್ತವಾಗಿ ಮಹಿಳೆಯರ ಸಮಸ್ಯೆಯನ್ನು ಬೀಟ್‌ಗಳಲ್ಲಿಯೇ ಆಲಿಸಲಿದ್ದಾರೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸಿ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದು, ಕೌಟುಂಬಿಕ ದೌರ್ಜನ್ಯ ವಿರುದ್ಧ ಜಾಗೃತಿ ಮತ್ತು ಕಾನೂನಿನ ಅರಿವು ಮೂಡಿಸಲಿದ್ದಾರೆ.
ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು,ಅಪರಾಧಗಳನ್ನು ಪತ್ತೆಹಚ್ಚುವುದು, ಸಮಾಜದಲ್ಲಿ ನಿರ್ಭಯ ವಾತಾವರಣವನ್ನು ಸೃಷ್ಟಿಸುವ ಜೊತೆಗೆ ರಕ್ಷಣೆ ಮತ್ತು ಸುರಕ್ಷತೆ ಒದಗಿಸುವ ಗುರುತರವಾದ ಜವಾಬ್ದಾರಿಗಳು ಪೊಲೀಸ್ ಇಲಾಖೆಯ ಮೇಲಿವೆ.
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಪ್ರಮುಖ ಉದ್ದೇಶಗಳು :
ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದು, ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರುವುದು, ಸಾರ್ವಜನಿಕರ ಮನೆ ಬಾಗಿಲಿಗೆ ಪೊಲೀಸ್ ಸೇವೆಯನ್ನು ಒದಗಿಸುವುದು, ಸೈಬರ್ ಅಪರಾಧ, ಮಾದಕ ವಸ್ತು, ಪೋಕ್ಸೊ ಕಾಯ್ದೆ, ಕಳವು, ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವುದು, ಮಹಿಳೆಯರ ಸುರಕ್ಷತೆಗೆ ಒತ್ತು ನೀಡುವುದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧಗಳನ್ನು ನಿಯಂತ್ರಿಸುವುದು ಒಟ್ಟಿನಲ್ಲಿ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳ ಮುಖಾಂತರ ಪೊಲೀಸ್ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸುವುದು. ಈ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಅಪರಾಧ ಚಟುವಟಿಕೆಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ಪೊಲೀಸರು ಮನೆಗಳಿಗೆ ಭೇಟಿ ನೀಡುವುದರಿಂದ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ, ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 'ಮನೆ ಮನೆಗೆ ಪೊಲೀಸ್' ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರ ಪಾತ್ರವು ಬಹಳ ಮುಖ್ಯವಾಗಿದೆ. ಬನ್ನಿ, ಅಂಜಿಕೆ ಇಲ್ಲದೆ ಮುಕ್ತ ಮನಸ್ಸಿನೊಂದಿಗೆ ಸಮಸ್ಯೆಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳಿರಿ.
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಈ ಉಪಕ್ರಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ್ದರು, ಮಾನ್ಯ ಗೃಹ ಸಚಿವರು ಡಾ. ಜಿ. ಪರಮೇಶ್ವರ್ ರವರು ಈ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ.
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಪ್ರಮುಖ ಉದ್ದೇಶಗಳು :
ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದು, ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರುವುದು, ಸಾರ್ವಜನಿಕರ ಮನೆ ಬಾಗಿಲಿಗೆ ಪೊಲೀಸ್ ಸೇವೆಯನ್ನು ಒದಗಿಸುವುದು, ಸೈಬರ್ ಅಪರಾಧ, ಮಾದಕ ವಸ್ತು, ಪೋಕ್ಸೊ ಕಾಯ್ದೆ, ಕಳವು, ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವುದು, ಮಹಿಳೆಯರ ಸುರಕ್ಷತೆಗೆ ಒತ್ತು ನೀಡುವುದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧಗಳನ್ನು ನಿಯಂತ್ರಿಸುವುದು ಒಟ್ಟಿನಲ್ಲಿ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳ ಮುಖಾಂತರ ಪೊಲೀಸ್ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸುವುದು. ಈ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಅಪರಾಧ ಚಟುವಟಿಕೆಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ಪೊಲೀಸರು ಮನೆಗಳಿಗೆ ಭೇಟಿ ನೀಡುವುದರಿಂದ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ, ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 'ಮನೆ ಮನೆಗೆ ಪೊಲೀಸ್' ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರ ಪಾತ್ರವು ಬಹಳ ಮುಖ್ಯವಾಗಿದೆ. ಬನ್ನಿ, ಅಂಜಿಕೆ ಇಲ್ಲದೆ ಮುಕ್ತ ಮನಸ್ಸಿನೊಂದಿಗೆ ಸಮಸ್ಯೆಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳಿರಿ.
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಈ ಉಪಕ್ರಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ್ದು, ಮಾನ್ಯ ಗೃಹ ಸಚಿವರು ಡಾ. ಜಿ. ಪರಮೇಶ್ವರ ರವರು ಈ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ.
🔘 House No / Site No.
ಮನೆ ಸಂಖ್ಯೆ / ನಿವೇಶನ ಸಂಖ್ಯೆ.
🔘 Address
ವಿಳಾಸ
🔘 Owner Name & Mob No.
ಮಾಲೀಕರ ಹೆಸರು ಮೊಬೈಲ್ ಸಂಖ್ಯೆ
🔘 Resident No. & Name ವಾಸವಿರುವವರ ಹೆಸರು ಮತ್ತು ಮೊಬೈಲ್ ಸಂಖ್ಯೆ
🔘 No. of Persons residing ಮನೆಯಲ್ಲಿ ವಾಸವಿರುವ ಒಟ್ಟು ವ್ಯಕ್ತಿಗಳ ಸಂಖ್ಯೆ
🔘 CCTV (Yes/No)
ಟಿವಿ ಇದೆಯೇ? ಹೌದು/ಇಲ್ಲ
🔘 Guard (Yes/No)
ಭದ್ರತಾ ವ್ಯವಸ್ಥೆ ಸೆಕ್ಯೂರಿಟಿ ಇದ್ದಾರೆಯೇ ಹೌದು/ಇಲ್ಲ
🔘 Other
ಇತರೆ
🔘 Police related
ಪೊಲೀಸರಿಗೆ ಸಂಬಂಧಪಟ್ಟಂತ
🔘 Other Department related
ಇತರೆ ಇಲಾಖೆಗೆ ಸಂಬಂಧಪಟ್ಟಂತ
🔘 Action taken on issues suggestions
ಸಮಸ್ಯೆ / ಸಲಹೆಗಳಿಗೆ ಕೈಗೊಂಡ ಕ್ರಮಗಳು
🔘 Remarks
ಷರಾ..
ಮನೆ ಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮದಲ್ಲಿ ಈ ಮಾಹಿತಿ ಸಂಗ್ರಹಿಸುವ ಸಾಧ್ಯತೆಗಳಿರುತ್ತವೆ ಸಾರ್ವಜನಿಕರು ಸಹಕರಿಸಲು ಇಲಾಖೆ ಯೂ ಕೋರಿದೆ.