ಲಿಂಗಸುಗೂರು: 79ನೇ ಸ್ವಾತಂತ್ರ್ಯ ದಿನಾಚರಣೆ – ಬಿಜೆಪಿ ಶಾಸಕರಿಂದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಟೀಕೆ.

Udayavani News
0
ಲಿಂಗಸುಗೂರು, :
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭರ್ಜರಿಯಾಗಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ದ್ವಜಾರೋಹಣ ವನ್ನು ಲಿಂಗಸೂಗೂರು ಸಹಾಯಕ ಆಯುಕ್ತರಾದ ಬಸವಣಪ್ಪ ಕಲಶಟ್ಟಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ. ಲಿಂಗಸೂಗೂರು ಶಾಸಕರಾದ ಮಾನಪ್ಪ ಡಿ ವಜ್ಜಲ 79 ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಮಾತನಾಡಿದ ಅವರು ದೇಶದಲ್ಲಿ ಸ್ವಾತಂತ್ರ್ಯವನ್ನು ಅನೇಕ ಹೋರಾಟ ತ್ಯಾಗ, ಬಲಿದಾನದಗಳನ್ನು. ನೀಡಿ ಸ್ವಾತಂತ್ರ ವನ್ನು ಪಡೆದು ಕೊಂಡಿದ್ದೇವೆ. “ದೇಶವು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಢನಾಯಕತ್ವದಲ್ಲಿ ಆರ್ಥಿಕ, ತಾಂತ್ರಿಕ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ರೈತ, ಕಾರ್ಮಿಕ, ಯುವಜನ, ಮಹಿಳೆಯರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬೃಹತ್ ಯೋಜನೆಗಳನ್ನು ಜಾರಿಗೆ ತಂದಿದೆ. ಆತ್ಮನಿರ್ಭರ ಭಾರತ, ಡಿಜಿಟಲ್ ಇಂಡಿಯಾ, ಸ್ಟಾರ್ಟ್‌ಅಪ್ ಇಂಡಿಯಾ, ರೈತ ಸಬಲೀಕರಣ ಯೋಜನೆಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿವೆ,” ಎಂದು ಹೇಳಿದರು.
ಅದೇ ವೇಳೆ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, “ಗ್ಯಾರಂಟಿ ಯೋಜನೆಗಳು ರಾಜ್ಯದ ಹಣಕಾಸು ಸ್ಥಿತಿಯನ್ನು ಹದಗೆಡಿಸುತ್ತಿವೆ. ಪ್ರಗತಿ ಯೋಜನೆಗಳಿಗೆ ಮೀಸಲಾಗಬೇಕಾದ ನಿಧಿ ಉಚಿತ ವಿತರಣಾ ಯೋಜನೆಗಳಿಗೆ ಮಿತಿಮೀರಿ ಬಳಸಲಾಗುತ್ತಿದೆ. ಇದರ ಪರಿಣಾಮವಾಗಿ ಲಿಂಗಸುಗೂರು ಸೇರಿದಂತೆ ಹೈದರಾಬಾದ್-ಕರ್ನಾಟಕ ಪ್ರದೇಶದ ಅಭಿವೃದ್ಧಿ ಯೋಜನೆಗಳು ವಿಳಂಬವಾಗುತ್ತಿವೆ. ರಸ್ತೆ, ನೀರಾವರಿ, ಶಿಕ್ಷಣ, ಆರೋಗ್ಯ ಕ್ಷೇತ್ರದ ಹಲವು ಪ್ರಮುಖ ಯೋಜನೆಗಳು ನಿಂತಿರುವುದು ದುಃಖಕರ” ಎಂದು ಹೇಳಿದರು.
ಅವರು ಮುಂದಾಗಿ, “ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನವನ್ನು ಸಮರ್ಪಕವಾಗಿ ಉಪಯೋಗಿಸದೆ, ರಾಜಕೀಯ ಲಾಭಕ್ಕಾಗಿ ಜನರ ಭವಿಷ್ಯವನ್ನು ಪಣಕ್ಕಿಡುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ” ಎಂದು ಆರೋಪಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶರಣ ಗೌಡ ಬಯ್ಯಾಪುರ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಭೂಪನ ಗೌಡ ಪಾಟೀಲ್ ಕರಡಕಲ ಪುರ ಸಭೆ ಅಧ್ಯಕ್ಷರಾದ ಬಾಬು ರೆಡ್ಡಿ ಮುನ್ನೂರು ಜಿಲ್ಲಾ ಗ್ಯಾರೆಂಟಿ ಯೋಜನೆ ಗಳ. ಅಧ್ಯಕ್ಷರಾದ ಪಾಮಯ್ಯ ಮುರಾರಿ ಅಮರೇಶ್ ಹಿರೇಹೆಸರೂರು. ಬಸನಗೌಡ ಮೇಟಿ ವೆಂಕಟೇಶ್ ಗುತ್ತೇದಾರ ಶಶಿದರ್ ಪಾಟೀಲ್ ತಾಲೂಕು ಮಟ್ಟದ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು, ವಿದ್ಯಾರ್ಥಿಗಳು ಮತ್ತು ನಾಗರಿಕರು ಹಾಜರಿದ್ದರು. ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ, ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಹೋರಾಟಗಾರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು.

Post a Comment

0Comments

Post a Comment (0)