ಅಫಜಲಪೂರ: ಅತನೂರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಿಪ್ಪಣ್ಣ ಕಂಟೆಪ್ಪ ಹೇರೂರು ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಪಂದ್ಯಾವಳಿಯಲ್ಲಿ ವಿಜೇತರಾಗಿ ಕಬಡ್ಡಿ ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷ ವ್ಯಕ್ತ ಪಡಿಸಿದ ಶಾಲೆಯ ಮುಖ್ಯ ಗುರುಗಳಾದ ರಾಜಶೇಖರ್ ತಲಾರಿ ನಮ್ಮ ಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಅಮೋಘ ಪ್ರದರ್ಶನ ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದು ಸಂತಸ ತಂದಿದೆ ಜೊತೆಗೆ ವಿದ್ಯಾರ್ಥಿಗಳ ಕ್ರೀಡೆಗೆ ಸದಾ ಬೆನ್ನೆಲಬಾಗಿ ನಿಂತ ದೈಹಿಕ ಶಿಕ್ಷಕರ ಶ್ರಮ ಬಹಳಷ್ಟಿದೆ ಎಂದು ದೈಹಿಕ ಶಿಕ್ಷಕರ ಶ್ರಮವನ್ನು ಶ್ಲಾಘಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿನಿಯರ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.