ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಬಿಜೆಪಿ ಬೆಂಗಳೂರು ಜಿಲ್ಲಾ ಕಾರ್ಯಾಲಯದ ಭಾವುರಾವ್ ದೇಶಪಾಂಡೆ ಭವನದಲ್ಲಿ ಗೀತಾಗಾಯನ ಕಾರ್ಯಕ್ರಮ ಜರುಗಿತು. ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಮಾಜಿ ಸಚಿವ ಹಾಗೂ ಶಾಸಕ ಕೆ. ಗೋಪಾಲಯ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಓಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಸೋಮಶೇಖರ್, ಮಾಜಿ ರಾಜ್ಯಕಾರ್ಯದರ್ಶಿ ಜಗದೀಶ್ ಹಿರೇಮನಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.