ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(114) ನಿಧನರಾಗಿದ್ದಾರೆಂದು ಮಾಹಿತಿ ಇದೀಗ ಲಭ್ಯವಾಗಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ ಎಂದು ತಿಳಿದು ಬಂದಿದೆ.
ಸಾಲುಮರದ ತಿಮ್ಮಕ್ಕ ( ಜನನ 30 ಜೂನ್ 1911 ರಲ್ಲಿ ) ಆಲದ ಮರದ ತಿಮ್ಮಕ್ಕ ಎಂದು ಕರೆಯಲ್ಪಡುವ ಇವರು ಕರ್ನಾಟಕ ರಾಜ್ಯದ ಒಬ್ಬ ಭಾರತೀಯ ಪರಿಸರವಾದಿ. ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕಂದೂರ್ ನಡುವಿನ 4.5km (2.8 ಮೈಲಿ ) ಹೆದ್ದಾರಿಯ ಉದ್ದಕ್ಕೂ 385 ಕ್ಕೂ ಹೆಚ್ಚು ಆಲದ ಮರಗಳನ್ನು ನೆಡುವ ಅವುಗಳನ್ನು ಪೋಷಿಸುವ ಕಾರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.
ಅವರು ಸುಮಾರು 8000 ಕ್ಕೂ ಹೆಚ್ಚು ಇತರ ಮರಗಳನ್ನು ನೆಟ್ಟಿದ್ದಾರೆ. ತಮ್ಮ ಪತಿಯ ಬೆಂಬಲದೊಂದಿಗೆ, ಅವರು ಮರಗಳನ್ನು ನಡುವಲ್ಲಿ ತಮ್ಮ ಜೀವನ ಸಾರ್ಥಕತೆ ಪಡಿಸಿಕೊಂಡರು. ಅವರು ಯಾವುದೇ ಔಪಚಾರಿಕ ಶಿಕ್ಷಣವನ್ನು ಪಡೆಯಲಿಲ್ಲ ಮತ್ತು ಹತ್ತಿರದ ಕಲ್ಲು ಗಣಿಗಾರಿಕೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರ ಕೆಲಸವನ್ನು ಭಾರತದ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಿಂದ ಗೌರವಿಸಲಾಗಿದೆ. ಅವರ ಕೆಲಸವನ್ನು ಭಾರತ ಸರ್ಕಾರ ಗುರುತಿಸಿತು. ಮತ್ತು ಅವರಿಗೆ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು.