ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಯ ಅಭಿಯಾನಕ್ಕೆ : ಬಸಣ್ಣ ನಾಯಕ ಭೇಟಿ.

Udayavani News
0
BIG NEWS: ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ "ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದ್ದು, ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ ಪಂಚಾಯಿತಿಗೆ ಸಲ್ಲಿಕೆ ಆಗಬೇಕಾಗಿರುವ ತೆರಿಗೆಯಲ್ಲಿ ಶೇ.100ರಷ್ಟು ವಸೂಲಿ ಮಾಡುವುದು ಗ್ರಾಮ ಪಂಚಾತಿಯ ಪ್ರಾಥಮಿಕ ಹೊಣೆಗಾರಿಕೆಯಾಗಿರುತ್ತದೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೂಢೀಕರಿಸಿಕೊಳ್ಳಲು ಕರವಸೂಲಾತಿ ಅಭಿಯಾನದ ಪ್ರಕ್ರಿಯೆಯನ್ನು ಒಂದು ವಿಶೇಷ ಅಂದೋಲನವನ್ನಾಗಿ ನಡೆಸಬೇಕಾಗಿರುತ್ತದೆ.


 ಹೀಗಾಗಿ ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಿ, ಕಡ್ಡಾಯವಾಗಿ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಬೇಕು.

ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಂಠಿತವಾಗಿರುವ ಕಂದಾಯ ವಸೂಲಾತಿ ಪ್ರಗತಿಯನ್ನು ಹೆಚ್ಚಿಸುವ ಹಿನ್ನಲೆಯಲ್ಲಿ ಕೂಡಲೇ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಂಡು ಪ್ರಗತಿ ಸಾಧಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕಂದಾಯ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ತಪ್ಪಿದ್ದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ತಿಳಿಸಿದ್ದಾರೆ.

ಜಿ.ಪಂ. ಸಿಇಒ ಅವರ ನಿರ್ದೇಶನದಂತೆ ಗ್ರಾಮ ಪಂಚಾಯತಿಗಳನ್ನು ಸಶಕ್ತಗೊಳಿಸುವ ಉದ್ದೇಶದಿಂದ ನಮ್ಮ ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೆ ಕರ ವಸೂಲಾತಿ ಆಂದೋಲನ ಪ್ರಾರಂಭವಾಗಿದ್ದು, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು, ಬಸಣ್ಣ ನಾಯಕ ಸರ್ ರವರು ಭೇಟಿ ನೀಡಿ, ವಿಶೇಷ ಕರ ವಸೂಲಾತಿ ಅಭಿಯಾನದ ಪ್ರಕ್ರಿಯೆನ್ನು ವೀಕ್ಷಿಸಿದರು ನಂತರ ಮನೆ ಮನೆಗೆ ಹಾಗೂ ಅಂಗಡಿ ಮುಗಟ್ಟುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಕರ ವಸೂಲಿಯ ಬಗ್ಗೆ ಮಾಹಿತಿ ನೀಡಿ ಪಂಚಾಯತ್ ಸಿಬ್ಬಂದಿಗಳಿಗೆ ಹೆಚ್ಚು ಕರ ಸಂಗ್ರಹಣಿ ಮಾಡುವಂತೆ ತಿಳಿಸಿದರು. ಮುದನೂರ, ಕನ್ನಳ್ಳಿ, ಹೆಬ್ಬಾಳ, ರಾಜನಕೊಳೂರ, ಗ್ರಾಮ ಪಚಾಯತಿಗೆ ಬೆಟ್ಟಿ ನೀಡಿದರು.

ವರದಿ : ಶಿವು ರಾಠೋಡ

Post a Comment

0Comments

Post a Comment (0)