ಶಿಗ್ಗಾಂವ: ಶಿಗ್ಗಾಂವ ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಯೋಗಾಸನ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಹಾವೇರಿ ವಿಶ್ವವಿದ್ಯಾಲಯ, ಕೆರೆಮತ್ತಿಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಯೋಗಾಸನ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ತಂಡದ ವಿ.ವಿ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಈ ಆಯ್ಕೆಯಲ್ಲಿ ಶ್ರೀ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಮಲತಾ ಕ್ಷೌರದ ಅವರು ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಸುಮಲತಾ ಕ್ಷೌರದ ಅವರು ಕರ್ನಾಟಕದ ಎಸ್. ವ್ಯಾಸ್ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ 2026ರ ಜನವರಿ 5ರಿಂದ 9ರವರೆಗೆ ನಡೆಯಲಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಯೋಗಾಸನ (ಮಹಿಳಾ) ಪಂದ್ಯಾವಳಿಯಲ್ಲಿ ಹಾವೇರಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.
ಈ ಸಾಧನೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳು ಅವರು ಸುಮಲತಾ ಕ್ಷೌರದ ಅವರಿಗೆ ಶುಭಾಶೀರ್ವಾದಗಳನ್ನು ನೀಡಿದ್ದು, ಮಹಾವಿದ್ಯಾಲಯದ ಆಡಳಿತಾಧಿಕಾರಿಗಳು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ ಹಾಗೂ ಬೋಧಕೆತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವರದಿಗಾರ: ಸೋಮಶೇಖರ ಲಮಾಣಿ