ವಿಜಯಪುರ : ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ.
ನಮ್ಮ ಭಾಗದಲ್ಲಿ ಇನ್ನಷ್ಟು ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಜೊತೆಗಿದ್ದರು.