ಹುಬ್ಬಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತಹದ್ದು:ವಿಜಯೇಂದ್ರ ಯಡಿಯೂರಪ್ಪ
ಕಾಂಗ್ರೆಸ್ ಕಾರ್ಪೊರೇಟರ್ ಬಿಜೆಪಿ ಕಾರ್ಯಕರ್ತೆಯ ಮೇಲೆ ವಿನಾಃ ಕಾರಣ ಆಪಾದನೆ ಹೊರಿಸಿ ಹಲ್ಲೆ ನಡೆಸಿ ಘಟನೆಯನ್ನು ತಿರುಚಿ, ಕೇಸು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕಾರ್ಪೊರೇಟರ್ ಮಾತು ಕೇಳಿ ಸಂಪೂರ್ಣ ಘಟನೆಯ ಹಿನ್ನೆಲೆಯನ್ನು ವಿಚಾರಿಸದೆ, ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ವಿವಸ್ತ್ರಗೊಳಿಸಿ ಥಳಿಸಿದ್ದಾರೆ.
ರಾಜ್ಯದಲ್ಲಿ ಪೊಲೀಸರು ಕಾಂಗ್ರೆಸ್ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ಈ ಘಟನೆ ಅತ್ಯಂತ ಖಂಡನೀಯ. ತಪ್ಪಿತಸ್ಥ ಪೊಲೀಸರ ಮೇಲೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಶ್ರೀ ವಿಜಯೇಂದ್ರ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರು ತಿಳಿಸಿದರು...